CrimeDistricts

ರಾಮನಗರ ಬಳಿ ಭೀಕರ ಅಪಘಾತ; ಇಬ್ಬರ ದುರ್ಮರಣ

ರಾಮನಗರ; ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ ನಡೆದಿದೆ. ರಾಮನಗರದ ಕೆಂಪೇಗೌಡನದೊಡ್ಡಿ ಬಳಿ ಹಿಂದಿನಿಂದ ಕಾರೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಇಬ್ಬರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಲಾರಿ ಬೆಂಗಳೂರಿನಿಂದ ಮೈಸೂರು ಕಡೆ ತೆರಳುತ್ತಿತ್ತು. ಕಾರು ಕೂಡಾ ಅದೇ ಮಾರ್ಗವಾಗಿ ಹೋಗುತ್ತಿದ್ದು, ಲಾರಿ ಓವರ್‌ಟೇಕ್‌ ಮಾಡಲು ಹೋಗಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಾರು ಬೆಂಗಳೂರಿನ ರಾಜಾಜಿನಗರ ಆರ್‌ಟಿಒ ಕಚೇರಿಯಲ್ಲಿ ನೋಂದಣಿಯಾಗಿದೆ. ಅಪಘಾತದ ಹಿನ್ನೆಲೆಯಲ್ಲಿ ಕೆಲಕಾಲ ಟ್ರಾಫಿಕ್‌ ಜಾಮ್‌ ಆಗಿತ್ತು. ಪೊಲೀಸರು ಬಂದು ಸಂಚಾರ ವ್ಯವಸ್ಥೆ ಸುಗಮಗೊಳಿಸಿದ್ದಾರೆ.

 

Share Post