DistrictsLifestyle

ಹಾಸ್ಟೆಲ್‌ ಸಿಬ್ಬಂದಿ ನಾಪತ್ತೆ; ವಿದ್ಯಾರ್ಥಿಗಳಿಗೆ ಅಡುಗೆ ಮಾಡಿ ಬಡಿಸಿದ ಪೊಲೀಸ್‌ ಇನ್ಸ್‌ಪೆಕ್ಟರ್‌

ರಾಯಚೂರು; ಹಾಸ್ಟೆಲ್‌ನಲ್ಲಿ ಅಡುಗೆ ಮಾಡಬೇಕಾದ ಸಿಬ್ಬಂದಿ ನಾಪತ್ತೆಯಾಗಿದ್ದರು. ವಾರ್ಡನ್‌ ಕೂಡಾ ಹಾಸ್ಟೆಲ್‌ಗೆ ಬಂದಿಲ್ಲ. ಕರೆ ಮಾಡಿದರೆ ಸರಿಯಾದ ಉತ್ತರವಿಲ್ಲ. ಇತ್ತ ವಿದ್ಯಾರ್ಥಿಗಳಿಗೆ ಹೊಟ್ಟೆ ತಾಳ ಹಾಕುತ್ತಿತ್ತು. ಮಧ್ಯಾಹ್ನ ತಿಂದವರಿಗೆ ತಡರಾತ್ರಿಯಾದರೂ ಊಟ ಸಿಕ್ಕಿರಲಿಲ್ಲ. ಕೊನೆಗೆ ವಿಧಿಯಿಲ್ಲದೆ ವಿದ್ಯಾರ್ಥಿಗಳು ಪೊಲೀಸರ ಮೊರೆ ಹೋದರು. ಪೊಲೀಸರು ಕರೆ ಮಾಡಿದರೂ ವಾರ್ಡನ್‌ನಿಂದ ಸರಿಯಾದ ಉತ್ತರ ಸಿಗಲಿಲ್ಲ. ಕೊನೆಗೆ ಪೊಲೀಸರೇ ಫೀಲ್ಡಿಗಿಳಿದರು. ಪೊಲೀಸ್‌ ಇನ್ಸ್‌ಪೆಕ್ಟರ್‌ ಅಡುಗೆ ಭಟ್ಟರಾದರು. ಅವರೇ ಅಡುಗೆ ತಯಾರಿಸಿ ವಿದ್ಯಾರ್ಥಿಗಳಿಗೆಲ್ಲಾ ಬಡಿಸಿದರು.

ಈ ಘಟನೆ ನಡೆದಿದ್ದು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ.  ಇಲ್ಲಿನ ಡಾ.ಬಿಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಹಾಸ್ಟೆಲ್​​ನಲ್ಲಿ ನಿನ್ನೆ ಸಂಜೆಯಿಂದ ಸಿಬ್ಬಂದಿ ಕಾಣೆಯಾಗಿದ್ದರು. ಫೋನ್‌ ಮಾಡದರೂ ಯಾರೂ ರೆಸ್ಪಾನ್ಸ್‌ ಮಾಡುತ್ತಿರಲಿಲ್ಲ. ಈ ವಿಷಯ ತಿಳಿದ ಪೊಲೀಸ್ ಇನ್​ಸ್ಪೆಕ್ಟರ್ ಹೊಸ್ಕೇರಪ್ಪ ತಾವೇ ಅಡುಗೆ ಮಾಡಿ ವಿದ್ಯಾರ್ಥಿಗಳಿಗೆ ಬಡಿಸಿದ್ದಾರೆ.

ಪೊಲೀಸರು ನೆರವಾಗಿದ್ದಕ್ಕೆ ವಿದ್ಯಾರ್ಥಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.

 

Share Post