DistrictsPolitics

ಸಿದ್ದರಾಮಯ್ಯ ವಿರುದ್ಧ 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ; ವರ್ತೂರ್‌ ಪ್ರಕಾಶ್‌

ಕೋಲಾರ; ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದರೆ ಅವರನ್ನು 50 ಸಾವಿರ ಮತಗಳ ಅಂತರದಿಂದ ಸೋಲಿಸುವುದಾಗಿ ಮಾಜಿ ಸಚಿವ ವರ್ತೂರ್‌ ಪ್ರಕಾಶ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸಿದ್ದರಾಮಯ್ಯ ಅವರು ಕೋಲಾರಕ್ಕೆ ಬಂದರೆ ಸೋಲೋದು ಗ್ಯಾರೆಂಟಿ. ಅವರಿಗೆ ಕೋಲಾರದಲ್ಲಿ ಜನ ಬೆಂಬಲವಿಲ್ಲ. ಮೊನ್ನೆ ಅವರು ಕೋಲಾರಕ್ಕೆ ಬಂದಾಗ ಬೇರೆ ಕ್ಷೇತ್ರಗಳಿಂದ ಜನರನ್ನು ಕರೆತರಲಾಗಿತ್ತು ಎಂದು ಹೇಳಿದ್ದಾರೆ.

ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ಯಾರಿಗೇ ಟಿಕೆಟ್‌ ನೀಡಿದರೂ ಅದನ್ನು ಗೌರವಿಸುತ್ತೇನೆ. ನಾನೂ ಕೂಡಾ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ. ನನಗೆ ಟಿಕೆಟ್‌ ಕೊಟ್ಟರೆ ಸಿದ್ದರಾಮಯ್ಯ ಅವರನ್ನು ಭಾರೀ ಅಂತರದಿಂದ ಸೋಲಿಸುತ್ತೇನೆ. ಬೇರೆ ಯಾರಿಗೇ ಟಿಕೆಟ್‌ ನೀಡಿದರೂ ಅವರನ್ನು ಗೆಲ್ಲಿಸಲು ಶ್ರಮಿಸುತ್ತೇನೆ ಎಂದು ವರ್ತೂರ್‌ ಪ್ರಕಾಶ್‌ ಹೇಳಿದ್ದಾರೆ.

Share Post