Districts

ಸಿ.ಎಂ.ಇಬ್ರಾಹಿಂ ನಮ್ಮವರು, ಸಿದ್ದರಾಮಯ್ಯ ಬಗ್ಗೆ ನನಗೆ ಗೊತ್ತಿಲ್ಲ: ಕುಮಾರಸ್ವಾಮಿ

ರಾಮನಗರ: ಸಿ.ಎಂ.ಇಬ್ರಾಹಿಂ ಅವರನ್ನು ಜೆಡಿಎಸ್‌ಗೆ ಸ್ವಾಗತ ಮಾಡುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾಋಎ. ಇಬ್ರಾಹಿಂ ಅವರು ನಮಗೆ ಹಳಬರು, ದೇವೇಗೌಡರ ಗರಡಿಯಲ್ಲಿ ಬೆಳೆದವರು. ನಾನು ಸಿದ್ದರಾಮಯ್ಯ ಜತೆ ಹೋಗಿ ದೇವೇಗೌಡರನ್ನು ದೂರ ಮಾಡಿಕೊಂಡೆ. ಅವರ ಕೊನೆ ಆಸೆಯಂತೆ ಮುಂದಿನ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು. ಹಾಗಾಗಿ ನಾನು ಜೆಡಿಎಸ್ ಸೇರ್ತೇನೆಂದು ಸ್ವತಃ ಅವರೇ ಹೇಳಿದ್ದಾರೆ. ಹೀಗಾಗಿ ಅವರು ಜೆಡಿಎಸ್‌ಗೆ ಬಂದ್ರೆ ನಾನು ಸ್ವಾಗತ ಮಾಡುತ್ತೇನೆ ಎಂದಿದ್ದಾರೆ.

ಇನ್ನೂ ಸಿದ್ದರಾಮಯ್ಯ ಬಗ್ಗೆ ನನಗೆ ಗೊತ್ತಿಲ್ಲ, ಅವರು ಯಾರನ್ನಾದ್ರೂ ಭೇಟಿ ಮಾಡಲಿ ನನಗೇನು ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸಿ.ಎಸ್.ಪುಟ್ಟರಾಜು ಹಾಗೂ ಇತರೆ ಜೆಡಿಎಸ್ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಯಾರನ್ನು ಭೇಟಿ ಮಾಡುತ್ತರೋ ಅದನ್ನು ಕಟ್ಟಿಕೊಂಡು ನನಗೇನು? ಯಾರು ಯಾರನ್ನ ಬೇಕಾದರೂ ಭೇಟಿ ಮಾಡಬಹುದು, ಚರ್ಚೆ ಮಾಡಬಹುದು. ನನಗೆ ನನ್ನ ಪಕ್ಷ, ಕಾರ್ಯಕರ್ತರು, ಜನ ಮುಖ್ಯ. ಕಾರ್ಯಕರ್ತರಿದ್ದರಷ್ಟೇ ಪಕ್ಷ ಮತ್ತು ಮುಖಂಡರು ಬೆಳೆಯೋದು ಎಂದು ನೇರವಾಗಿ ಹೇಳಿದ್ರು.

ಕಾರ್ಯಕರ್ತರಿಂದ ಮುಖಂಡರು ಉದ್ಭವ ಆಗುತ್ತಾರೆ. ಬಹಳಷ್ಟು  ಮುಖಂಡರು ಜೆಡಿಎಸ್ ನಲ್ಲಿ ಬೆಳೆದಿದ್ದಾರೆ. ನಂತರ ಪಕ್ಷವನ್ನ ಬಿಟ್ಟು ಹೋಗಿದ್ದಾರೆ. ಜೆಡಿಎಸ್ ಕಾರ್ಯಕರ್ತರಿಗೆ ಮುಖಂಡರನ್ನು ಬೆಳೆಸುವ ಶಕ್ತಿಯಿದೆ. 2023ಕ್ಕೆ ಜೆಡಿಎಸ್ ಶಕ್ತಿ ಏನೆಂದು ತಿಳಿಯಲಿದೆ ಎಂದು ಮಾಜಿ ಸಿಎಂ ಭರವಸೆ ಮಾತುಗಳನ್ನಾಡಿದ್ರು.

 

 

Share Post