ಮಳೆ ಬರದಿದ್ದರೆ ಮೋಡ ಬಿತ್ತನೆ ಮಾಡ್ತೀವಿ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ; ಈ ಬಾರಿ ಮುಂಗಾರು ಚುರುಕಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಒಂದು ವೇಳೆ ಮಳೆ ಆಗದಿದ್ದರೆ ಮೋಡ ಬಿತ್ತನೆಗೆ ಚಿಂತನೆ ನಡೆಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಲವೆಡೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಒಂದು ವೇಳೆ ಮಳೆ ಬರದಿದ್ದರೆ ಮೋಡ ಬಿತ್ತನೆ ಮಾಡಲಾಗುತ್ತದೆ ಎಂದರು.
ಮುಂದಿನ ಏಳು ದಿನಗಳಲ್ಲಿ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹೇಳಿದ್ದಾರೆ. ಕಾದುನೋಡೋಣ. ಹಲವು ಜಿಲ್ಲೆಗಳಲ್ಲಿ ಈಗಾಗಲೇ ಕುಡಿಯುವ ನೀರಿಗೂ ತೊಂದರೆಯಾಗಿದೆ. ಬೆಳಗಾವಿ ಜಿಲ್ಲೆಯ ರಕ್ಕಸಕೊಪ್ಪ ಜಲಾಶಯ ಸಹ ಖಾಲಿ ಆಗಿದೆ. ಹೀಗಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.