ಅಧಿಕಾರಕ್ಕೆ ಬಂದರೆ 200 ಯೂನಿಟ್ ವಿದ್ಯುತ್ ಫ್ರೀ; ಮೊದಲ ಭರವಸೆ ನೀಡಿದ ಕಾಂಗ್ರೆಸ್
ಬೆಳಗಾವಿ; ಈ ಬಾರಿ ಅಧಿಕಾರ ಹಿಡಿಯಕೇಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್ ಇಂದಿನಿಂದ ಬಸ್ ಯಾತ್ರೆ ಆರಂಭಿಸಿದೆ. ಬೆಳಗಾವಿಯಿಂದ ಬಸ್ ಯಾತ್ರೆ ಆರಂಭಿಸಲಾಗಿದ್ದು, ಮೊದಲೇ ದಿನವೇ ದೊಡ್ಡ ಭರವಸೆ ನೀಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಮನೆಗಳಿಗೆ ತಿಂಗಳಿಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಘೋಷಣೆ ಮಾಡಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಈ ಗೃಹ ಜ್ಯೋತಿ ಯೋಜನೆ ಜಾರಿಗೆ ತರುತ್ತೇವೆ. ಪ್ರತಿ ಮನೆಗೂ 200 ಯೂನಿಟ್ ವಿದ್ಯುತ್‌ನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಭರವಸೆ ನೀಡಿದೆ. ಅದರ ಪೋಸ್ಟರ್‌ಗಳನ್ನು ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಹಲವು ಕಾಂಗ್ರೆಸ್ ನಾಯಕರು ಪ್ರದರ್ಶಿಸಿದ್ದಾರೆ. ಅವಶ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಈ ಹಿನ್ನೆಲೆಯಲ್ಲಿ ಸಾಮಾನ್ಯ ಜನರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಉಚಿತ ವಿದ್ಯುತ್ ಯೋಜನೆ ಜಾರಿ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.