Districts

ಕನ್ನಡಚಿತ್ರರಂಗದ ನಾಯಕತ್ವವನ್ನು ಶಿವರಾಜ್‍ಕುಮಾರ್ ಗೆ ವಹಿಸಿಲಿ

ಮೈಸೂರು: ಶಿವರಾಜ್‍ಕುಮಾರ್ ಅವರು ಕನ್ನಡ ಚಿತ್ರರಂಗದ ನಾಯಕತ್ವವಹಿಸಿಕೊಳ್ಳಲಿ ಎಂದು ನಟ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಕನ್ನಡಪರ ಹೋರಾಟ ವಿಚಾರದಲ್ಲಿ ಸಿನಿಮಾ ನಟರು ಕೇವಲ ಟ್ವೀಟ್ ಮಾಡಿ ಸುಮ್ಮನಾಗಬಾರದು. ಸಿನಿಮಾದವರು ಬೆಳಗಾವಿಗೆ ಹೋಗಿ ಹೋರಾಟಕ್ಕೆ ಬೆಂಬಲ ನೀಡಬೇಕು. ಸಿನಿಮಾ ರಂಗದಲ್ಲಿ ನಾಯಕತ್ವದ ಕೊರತೆ ಇದೆ ಎಂದಿದ್ದಾರೆ.ಡಾ. ರಾಜ್ ಅಂಬರೀಶ್ ನಂತರ ನಾಯಕತ್ವ ಇಲ್ಲದಂತಾಗಿದೆ. ಹೀಗಾಗಿ ಕನ್ನಡ ಹೋರಾಟಕ್ಕೆ ಬನ್ನಿ ಅಂತಾ ಕರೆಯಬೇಕಾದ ದುಸ್ಥಿತಿ ಇದೆ. ಸಿನಿಮಾ ರಂಗಕ್ಕೆ ಉತ್ತಮ ನಾಯಕತ್ವದ ಅವಶ್ಯಕತೆ ಇದೆ. ಹ್ಯಾಟ್ರಿಕ್ ಹೀರೋ ಡಾ ಶಿವರಾಜ್ ಕುಮಾರ್ ನಾಯಕತ್ವ ವಹಿಸಿಕೊಳ್ಳಬೇಕು.

Share Post