Districts

ಐಪಿಎಲ್‌ ಬೆಟ್ಟಿಂಗ್‌ನಿಂದ ನಷ್ಟ..?; ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ..!

ಚಿಕ್ಕಬಳ್ಳಾಪುರ; ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡು ಸಾಲದ ಸುಳಿಯಲ್ಲಿ ಸಿಲುಕಿದ್ದ ಬಿಬಿಎ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ. ಚಿಕ್ಕಬಳ್ಳಾಪುರ ಬಳಿಯ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಗುಡಿಬಂಡೆ ಮೂಲದ ಗೌತಮ್‌ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮೊದಲು ಯಾವುದೇ ಡೆತ್‌ನೋಟ್‌ ಬರೆದಿಟ್ಟಿಲ್ಲ. ವಿದ್ಯಾರ್ಥಿ ಗೌತಮ್‌ ಚಿಕ್ಕಬಳ್ಳಾಪುರದ ಎಸ್‌ಜೆಸಿಐಟಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಗೌತಮ್‌ ಐಪಿಎಲ್‌ ಬೆಟ್ಟಿಂಗ್‌ ಆಡಿ ಸಾಕಷ್ಟು ನಷ್ಟ ಅನುಭವಿಸಿದ್ದ. ಸಾಲದ ಸುಳಿಯಲ್ಲಿ ಸಿಲುಕಿದ್ದ ಎಂದು ಹೇಳಲಾಗಿದೆ. ಸಾಲಗಾರರ ಕಾಟಕ್ಕೆ ತಾಳದೆ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ನಂದಿಗಿರಿಧಾಮ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share Post