5 ಕೆಜಿ ಅಕ್ಕಿ ಕೊಡಲು ಪ್ರಾರಂಭಿಸಿದ್ದು ಕಾಂಗ್ರೆಸ್‌ನ ಯುಪಿಎ ಸರ್ಕಾರ; ಸಚಿವ ಸಂತೋಷ್ ಲಾಡ್
ಹುಬ್ಬಳ್ಳಿ; ಐದು ಕೆಜಿ ಅಕ್ಕಿ ಕೊಡಲು ಪ್ರಾರಂಭಿಸಿದ್ದು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಲ್ಲ. ಮೋದಿ ಅಧಿಕಾರಕ್ಕೆ ಮೊದಲೇ ಇತ್ತು. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಈ ಯೋಜನೆ ಜಾರಿ ಮಾಡಿದ್ದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವಿದ್ದಾಗ ಆಹಾರ ಭದ್ರತಾ ಕಾಯ್ದೆ ತರಲಾಗಿತ್ತು. ಇದರಡಿಯಲ್ಲಿ ಅಕ್ಕಿ ನೀಡಲು ಶುರು ಮಾಡಲಾಯಿತು ಎಂದರು.
ಯುಪಿಎ ಜಾರಿಗೆ ತಂದ ಆಹಾರ ಭದ್ರತಾ ಕಾಯ್ದೆಯಡಿ ಈಗ ಐದು ಕೆಜಿ ಅಕ್ಕಿ ನೀಡಲಾಗುತ್ತಿದೆ. ಅದಕ್ಕೆ ಐದು ಕೆಜಿ ಸೇರಿಸಿ ಹತ್ತು ಕೆಜಿ ನೀಡುತ್ತೇವೆ ಎಂದು ನಾವು ಹೇಳಿದ್ದೆವು. ಆ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.