ಐಟಿಐ ಕಾಲೇಜು ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಶಾಸಕ..!
ಮಂಡ್ಯ; ಜೆಡಿಎಸ್ ಶಾಸಕ ಶ್ರೀನಿವಾಸ್ ಕಾಲೇಜು ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಇಲ್ಲಿನ ಐಟಿ ಕಾಲೇಜಿನ ಪ್ರಾಂಶುಪಾಲರಿಗೆ ಶಾಸಕ ಶ್ರೀನಿವಾಸ ಎರಡು ಬಾರಿ ಕಪಾಳಮೋಕ್ಷ ಮಾಡಿದ್ದಾರೆ. ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಶಾಸಕರ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮಂಡ್ಯದ ಐಟಿಐ ಕಾಲೇಜು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ನಡೆಯುತ್ತಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕ ಎಂ.ಶ್ರೀನಿವಾಸರ್ ಅವರು ಕಾಲೇಜಿನ ಪ್ರಾಂಶುಪಾಲ ನಾಗಾನಂದ್ ಕೈಮಾಡಿದ್ದಾರೆ. ಅಷ್ಟೇ ಅಲ್ಲ, ಕೆಟ್ಟ ಪದಗಳಲ್ಲಿ ಬೈದಿದ್ದಾರೆ. ಕಾಲೇಜಿನ ಮೂಲಭೂತ ಸೌಕರ್ಯ ಸರಿಯಾಗಿ ಇಲ್ಲ. ಕಾಲೇಜಿನ ವ್ಯವಸ್ಥೆ ಬಗ್ಗೆ ಸರಿಯಾದ ಮಾಹಿತಿ ನೀಡಲಿಲ್ಲ ಎಂದು ಆರೋಪಿಸಿ ಶಾಸಕ ಶ್ರೀನಿವಾಸ್ ಪ್ರಿನ್ಸಿಪಲ್‌ಗೆ 2 ಬಾರಿ ಹೊಡೆದಿದ್ದಾರೆ. ಶಾಸಕ ಶ್ರೀನಿವಾಸ್ ವರ್ತನೆಗೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.