DistrictsPolitics

ಶಾಸಕಾಂಗ ಪಕ್ಷದ ಸಭೆಗೆ ಜೆ.ಪಿ.ನಡ್ಡಾ ಆಗಮಿಸುತ್ತಾರೆ; ವಿಜಯೇಂದ್ರ

ಕೋಲಾರ; ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿರುವ ಅವರು, ಲೋಕಸಭಾ ಚುನಾವಣೆಯಲ್ಲಿ ಜಯಬೇರಿ ಬಿಜೆಪಿ ಭಾರಿಸಬೇಕು ಎಂದು ಕೋಲಾರದ ಜನಕ್ಕೆ ಕರೆ ಕೊಟ್ಟರು.

ರಾಜ್ಯದಲ್ಲೂ ಬಿಜೆಪಿ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಬೇಕು. ಮೂರನೇ ಬಾರಿಗೆ ಪ್ರಧಾನಿ ಮೋದಿ ಆಯ್ಕೆಯಾಗಬೇಕು. ಬಿಜೆಪಿ ರಾಜ್ಯಧ್ಯಕ್ಷ ಹುದ್ದೆ ನಿಭಾಯಿಸುವ ಹಲವಾರು ಹಿರಿಯರಿದ್ದರು. ಆದ್ರೆ, ನನಗೆ ಹೈಕಮಾಂಡ್‌ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡುತ್ತೇನೆ ಎಂದು ವಿಜಯೇಂದ್ರ ಹೇಳಿದರು.

ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ಎಲ್ಲಾ ಶಾಸಕರುಗಳು ಭಾಗವಹಿಸುತ್ತಾರೆ. ಶಾಸಕಾಂಗ ಪಕ್ಷದ ಸಭೆಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬರಲಿದ್ದಾರೆ ಎಂದು ಬಿವೈ ವಿಜಯೇಂದ್ರ ಹೇಳಿದರು.

Share Post