ಕೊನೆಗೂ ಒಂದಾದ ಕೆ.ಎಚ್.ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬಣಗಳು
ಕೋಲಾರ; ಕೋಲಾರದಲ್ಲಿ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತೇನೆ ಎಂದು ಘೋಷಣೆ ಮಾಡಿದಾಗ ಕೆ.ಎಚ್.ಮುನಿಯಪ್ಪ ಬಣ ಸಿದ್ದರಾಮಯ್ಯ ವಿರುದ್ಧ ಕೆಲಸ ಮಾಡಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು. ಯಾಕಂದ್ರೆ ರಮೇಶ್ ಕುಮಾರ್ ಬಣ ಹಾಗೂ ಕೆ.ಎಚ್.ಮುನಿಯಪ್ಪ ಬಣಗಳು ಕೋಲಾರದಲ್ಲಿ ಹಾವು-ಮುಂಗಸಿಗಳಂತೆ ಆಡುತ್ತಿದ್ದವು. ಆದ್ರೆ ಇದೀಗ ಸಿದ್ದರಾಮಯ್ಯ ಅವರಿಗಾಗಿ ಎರಡೂ ಬಣಗಳು ಒಂದಾಗಿವೆ.
ಹಲವು ವರ್ಷಗಳಿಂದ ಇದ್ದ ಗುಂಪುಗಾರಿಕೆ ಹಾಗೂ ಭಿನ್ನಮತ ಮರೆತು ಎರಡೂ ಬಣಗಳ ಕಾರ್ಯಕರ್ತರು ಹಾಗೂ ನಾಯಕರು ಒಂದಾಗಿ ಭರ್ಜರಿ ಕ್ಯಾಂಪೇನ್ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಸುದರ್ಶನ್, ಪರಿಷತ್ ಸದಸ್ಯ ಅನಿಲ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಸೇರಿದಂತೆ ಅನೇಕರು ಈ ಪ್ರವಾಸದಲ್ಲಿ ಭಾಗಿಯಾಗಿದ್ದಾರೆ.