DistrictsPolitics

ಬಿಜೆಪಿ ಸೇರ್ತಾರಂತೆ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ

ಶಿವಮೊಗ್ಗ; ಸಾಗರ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಸಿಗದಿದ್ದಕ್ಕೆ ನೊಂದಿರುವ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರ ಪುತ್ರಿ ರಾಜನಂದಿನಿ ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಇಂದು ಈ ಬಗ್ಗೆ ಮಾತನಾಡಿರುವ ಅವರು, ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರೋದಾಗಿ ಪ್ರಕಟಿಸಿದ್ದಾರೆ.

ಸಾಗರ ಕ್ಷೇತ್ರವನ್ನು ಕಾಗೋಡು ತಿಮ್ಮಪ್ಪ ಅವರು ಪ್ರತಿನಿಧಿಸುತ್ತಿದ್ದರು. ಆದ್ರೆ ಅವರಿಗೆ ವಯಸ್ಸಾಗಿರುವುದರಿಂದ ಸ್ಪರ್ಧೆ ಮಾಡಲು ನಿರಾಕರಿಸಿದ್ದಾರೆ. ಹೀಗಾಗಿ ಅವರ ಪುತ್ರಿ ರಾಜನಂದಿನಿ ಕಾಂಗ್ರೆಸ್‌ ಟಿಕೆಟ್‌ ಬಯಸಿದ್ದರು. ಹಲವು ವರ್ಷಗಳಿಂದ ಅವರು ಸಾಗರ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ್ದರು. ಆದ್ರೆ ಕಾಂಗ್ರೆಸ್‌ ಹೈಕಮಾಂಡ್‌ ರಾಜನಂದಿನಿಗೆ ಟಿಕೆಟ್‌ ನೀಡಿಲ್ಲ. ಬದಲಾಗಿ ಬೇಳೂರು ಗೋಪಾಲಕೃಷ್ಣ ಅವರಿಗೆ ಮಣೆ ಹಾಕಿದೆ. ಈ ಹಿನ್ನೆಲೆಯಲ್ಲಿ ರಾಜನಂದಿನಿಯವರು ಬಿಜೆಪಿ ಸೇರಲು ಮುಂದಾಗಿದ್ದಾರೆ.

Share Post