Districts

ಕಲಬುರಗಿ ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

ಅಫಜಲಪುರ: ಕಲಬುರಗಿ ಜಿಲ್ಲೆ ಅಫಜಲಪುರ ಬಳಿಯ ಬಳೂರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತಪಟ್ಟ ಐವರಲ್ಲಿ ನಾಲ್ವರು ಮಹಿಳೆಯರು ಹಾಗೂ ಒಬ್ಬ ಪುರುಷ ಇದ್ದಾರೆ.

ಮೃತರೆಲ್ಲರೂ ಮಹಾರಾಷ್ಟ್ರ ಮೂಲದವರು ಎಂದು ತಿಳಿದುಬಂದಿದೆ. ಶುಕ್ರವಾರ ನಸುಕಿನಲ್ಲಿ ದೇವಲಗಾಣಗಾಪುರಕ್ಕೆ ಬಂದಿದ್ದ ಇವರು ದತ್ತಾತ್ರೇಯರ ದರ್ಶನ ಪಡೆದು ಮರಳುತ್ತಿದ್ದರು. ಎದುರಿಗೆ ಬಂದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ, ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿದೆ. ಅವಘಡದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

Share Post