CrimeDistricts

ಹುಬ್ಬಳ್ಳಿಯಲ್ಲಿ ರಾತ್ರಿಯಿಡೀ ಮಳೆ; ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ಹುಬ್ಬಳ್ಳಿ; ಕಳೆದ ರಾತ್ರಿ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿದಿದೆ. ಅದರಲ್ಲೂ ಹುಬ್ಬಳ್ಳಿಯಲ್ಲಿ ರಾತ್ರಿಯಿಡೀ ಮಳೆ ಸುರಿದಿದ್ದು ತಗ್ಗು ಪ್ರದೇಶಗಳು ಜಲಾವೃತವಾಗಿದೆ. ಇದ್ರಿಂದ ಮನೆಗಳಿಗೂ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಮನೆ-ಅಂಗಡಿಗಳಿಗೆ ನೀರು ನುಗ್ಗಿದೆ.

ವಾಣಿಜ್ಯ ಸಂಕೀರ್ಣಗಳು ಹಾಗೂ ಅಪಾರ್ಟ್‌ಮೆಂಟ್ ಗಳ ತಳಮಹಡಿಗಳು ಸಂಪೂರ್ಣ ಜಲಾವೃತವಾಗಿವೆ. ಗ್ರಾಮೀಣ ಭಾಗದಲ್ಲಿ ಕೆಲ ಮನೆಗಳು ಕುಸಿದಿವೆ ಎಂದು ತಿಳಿದುಬಂದಿದೆ. ಒಳ ಚರಂಡಿಗಳು ಕಟ್ಟಿಕೊಂಡಿದ್ದರಿಂದ ಮ್ಯಾನ್‌ ಹೋಲ್‌ಗಳು ಓಪನ್‌ ಆಗಿ ಅವಾಂತರ ಸೃಷ್ಟಿ ಮಾಡಿದೆ.

Share Post