Districts

ಮೇ 19ಕ್ಕೆ SSLC ಫಲಿತಾಂಶ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಮಡಿಕೇರಿ; SSLC ಪರೀಕ್ಷಾ ಫಲಿತಾಂಶವನ್ನು ಇದೇ ಮೇ 19 ಕ್ಕೆ ಆನ್‌ಲೈನ್‌ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೌಲ್ಯಮಾಪನ ಮುಕ್ತಾಯವಾಗಿದೆ. ಫಲಿತಾಂಶಕ್ಕೆ ಸಿದ್ಧತೆ ನಡೆಯುತ್ತಿದೆ. ಮೇ 19ಕ್ಕೆ ರಿಸಲ್ಟ್‌ ಲಭ್ಯವಾಗಲಿದೆ ಎಂದು ಹೇಳಿದರು.

ಮೇ 19ರಂದು ಬೆಳಿಗ್ಗೆ 10.30ರ ಬಳಿಕ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು ಎಂದ ಸಚಿವ ಬಿ.ಸಿ.ನಾಗೇಶ್‌, ಮೇ 16ರಂದು ತುಮಕೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಿಕಾ ಚೇತರಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

Share Post