CrimeDistrictsPolitics

ಕೆರಗೋಡು ಧ್ವಜಸ್ತಂಭ ವಿವಾದ; ಕೆರಗೋಡಿ ಪಿಡಿಒ ಅಮಾನತು ಮಾಡಿದ ಜಿಪಂ ಸಿಇಒ

ಮಂಡ್ಯ; ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಇಳಿಸಿದ ಪ್ರಕರಣ ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ವಿರುದ್ಧ ವಿಪಕ್ಷಗಳು, ಸಂಸ್ಥೆಗಳು ಹೋರಾಟಕ್ಕಿಳಿದಿವೆ. ಈ ನಡುವೆ ಸರ್ಕಾರ, ಕೆರಗೋಡು ಪಿಡಿಒ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

ಹನುಮ ಧ್ವಜ ತೆರವುಗೊಳಿಸಿದ್ದನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಜೋರಾಗಿ ನಡೆಯುತ್ತಿವೆ. ಮಂಡ್ಯದಲ್ಲಿ ಬಿಜೆಪಿ, ಜೆಡಿಎಸ್‌ ಜಂಟಿಯಾಗಿ ಪ್ರತಿಭಟನೆಗಳನ್ನು ಮಾಡುತ್ತಿವೆ.  ಇದರ ಬೆನ್ನಲ್ಲೇ ಕೆರಗೋಡು ಗ್ರಾಮದ ಪಿಡಿಓ ಬಿ.ಎಂ.ಜೀವನ್ ಅವರನ್ನು ಅಮಾನತು ಮಾಡಲಾಗಿದೆ. ಮಂಡ್ಯ ಜಿಲ್ಲಾ ಪಂಚಾಯತ್‌ ಸಿಇಓ ಈ ಆದೇಶ ಹೊರಡಿಸಿದ್ದಾರೆ.

ಧ್ವಜ ಸ್ತಂಭ ನಿರ್ಮಾಣಕ್ಕೆ ಅನುಮತಿ ನೀಡಿ ಪಿಡಿಒ ಕರ್ತವ್ಯ ಲೋಪ ಎಸಗಿದ್ದಾರೆ. ನಿಯಮ ಉಲ್ಲಂಘನೆ ಮಾಡಿ ಖಾಸಗಿಯವರಿಗೆ ಧ್ವಜ ಸ್ತಂಭ ನಿರ್ಮಾಣಕ್ಕೆ ನೀಡಲಾಗಿದೆ ಎಂಬ ಕಾರಣ ನೀಡಿ ಪಿಡಿಒ ಅಮಾನತು ಮಾಡಲಾಗಿದೆ. ಹೀಗಾಗಿ ಕೆರಗೋಡು ಗ್ರಾಮದಲ್ಲಿ ನಡೆದ ಸಂಘರ್ಷಕ್ಕೆ ಪಿಡಿಓ ನೇರ ಕಾರಣವಾಗಿದ್ದಾರೆ ಎಂದೂ ಆರೋಪಿಸಲಾಗಿದೆ.

 

Share Post