DistrictsPolitics

ಮತದಾನ ಮಾಡಿ ಆಟೋ ಓಡಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌

ರಾಮನಗರ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಕನಕಪುರ ತಾಲ್ಲೂಕಿನ ತಮ್ಮ ಸ್ವಗ್ರಾಮ ದೊಡ್ಡಾಲನಹಳ್ಳಿ ಗ್ರಾಮದಲ್ಲಿ ಮತ ಚಲಾವಣೆ ಮಾಡಿದರು. ಅನಂತರ ಅವರು ಆಟೋ ಓಡಿಸುವ ಮೂಲಕ ಗಮನ ಸೆಳೆದರು. ಜನರನ್ನು ಕೂರಿಸಿಕೊಂಡು ಡಿ.ಕೆ.ಶಿವಕುಮಾರ್‌ ಅವರು ಆಟೋ ಓಡಿಸಿದರು.

ಇದೇ ವೇಳೆ ಜನರು ಮುಗಿಬಿದ್ದಿದ್ದರು. ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಸೆಲ್ಫಿ ತೆಗೆಸಿಕೊಂಡು ಖುಷಿಪಟ್ಟರು. ಡಿ.ಕೆ.ಶಿವಕುಮಾರ್‌ ಅವರು ಕನಕಪುರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದು, ಅವರ ವಿರುದ್ಧ ಆರ್‌.ಅಶೋಕ್‌ ಕಣದಲ್ಲಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರು ನಾಮಪತ್ರ ಸಲ್ಲಿಸಿ ಹೋದ ಮೇಲೆ ಪ್ರಚಾರಕ್ಕೆ ಬಂದಿರಲಿಲ್ಲ. ಬಹಿರಂಗ ಪ್ರಚಾರದ ಕೊನೆಯ ದಿನ ಭಾರಿ ಬಹಿರಂಗ ಸಭೆ ನಡೆಸಿ ಮತಯಾಚನೆ ಮಾಡಿದ್ದರು.

Share Post