ಗರ್ಭಿಣಿಯರಿಗೆ ಆರೋಗ್ಯ ಕಿಟ್ ವಿತರಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ
ರಾಮನಗರ; ಕನಕಪುರದಲ್ಲಿ ಇನ್ಫೋಸಿಸ್ ಫೌಂಡೇಶನ್ 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ 100 ಹಾಸಿಗೆ ಸಾಮರ್ಥ್ಯದ ಹೆರಿಗೆ ಮತ್ತು ಮಕ್ಕಳ ಅರೋಗ್ಯ ಆಸ್ಪತ್ರೆಯನ್ನು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥ ಸುನೀಲ್ ಕುಮಾರ್ ಧಾರೇಶ್ವರ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಸಚಿವ ಸುಧಾಕರ್ ಭಾನುವಾರ ಉದ್ಘಾಟಿಸಿದರು.
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ ಕೆ ಸುರೇಶ್, ಎಂಎಲ್ಸಿ ಎಸ್ ರವಿ, ಇನ್ಫೋಸಿಸ್ ಫೌಂಡೇಶನ್ ನ ಶೃತಿ ಖುರಾನ ಮತ್ತಿತರರು ಭಾಗವಹಿಸಿದ್ದರು.ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಗರ್ಭಿಣಿಯರಿಗೆ ಅರೋಗ್ಯ ಕಿಟ್ ಗಳನ್ನ ವಿತರಿಸಿದರು.