Districts

ಎಲ್ಲರೂ ಆಗಿದ್ದಾರೆ, ದಲಿತ ಮುಖ್ಯಮಂತ್ರಿ ಯಾಕೆ ಆಗಬಾರದು..?; ಡಿ.ಕೆ.ಶಿವಕುಮಾರ್‌ ಪ್ರಶ್ನೆ

ಮೈಸೂರು; ಕಾಂಗ್ರೆಸ್‌ ಪಕ್ಷ ಬಹುತೇಕ ಎಲ್ಲ ಸಮುದಾಯದ ನಾಯಕರಿಗೆ ಸಿಎಂ ಆಗುವ ಅವಕಾಶ ಕೊಟ್ಟಿದೆ. ಹೀಗಾಗಿ ದಲಿತ ಸಮುದಾಯದವರು ಯಾಕೆ ಸಿಎಂ ಆಗಬಾರದು ಎಂದು ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ. ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಕೇಳಿದ ಪ್ರಶ್ನೆ ಅವರು ಈ ರೀತಿ ಉತ್ತರಿಸಿದರು.

ರಾಜ್ಯದಲ್ಲಿ ದೇವರಾಜ ಅರಸು, ವೀರಪ್ಪ ಮೊಯ್ಲಿ, ಗುಂಡೂರಾವ್‌, ಬಂಗಾರಪ್ಪ, ಸಿದ್ದರಾಮಯ್ಯ ಹೀಗೆ ಎಲ್ಲರೂ ಸಿಎಂ ಆಗಿದ್ದಾರೆ. ದಲಿತ ನಾಯಕರಿಗೂ ಸಿಎಂ ಸ್ಥಾನ ಕೊಟ್ಟರೆ ತಪ್ಪೇನು ಎಂದು ಅವರು ಡಿ.ಕೆ.ಶಿವಕುಮಾರ್‌ ಹೇಳಿದರು. ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ಎದುರಿಸುತ್ತೇವೆ. 136ಕ್ಕಿಂತಲೂ ಹೆಚ್ಚು ಸೀಟುಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ. ಆಂತರಿಕ ಸಮೀಕ್ಷೆಯೂ ನಮಗೆ ಬಹುಮತ ಬರಲಿದೆಯೆಂಬುದನ್ನು ಹೇಳಿದೆ ಎಂದು ಡಿ.ಕೆ.ಶಿವಕುಮಾರ್‌ ಇದೇ ವೇಳೆ ತಿಳಿಸಿದರು.

ಇನ್ನು ಸಿದ್ದರಾಮೋತ್ಸವದ ಬಗ್ಗೆ ಮಾತನಾಡಿದ ಅವರು, ಮನುಷ್ಯನ ಬದುಕಿನಲ್ಲಿ ಹಲವು ಮೈಲುಗಲ್ಲುಗಳಿರುತ್ತವೆ. ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಪ್ರಯುಕ್ತ ಅಭಿಮಾನಿಗಳು ಸಿದ್ದರಾಮೋತ್ಸವ ಆಚರಿಸುತ್ತಿದ್ದಾರೆ. ಜನ್ಮದಿನದ ಸಂದರ್ಭದಲ್ಲಿ ಅವರು ನಡೆದು ಬಂದ ದಾರಿಯನ್ನು ಮೆಲುಕು ಹಾಕಬಾರದು ಎಂದರೆ ಹೇಗೆ?. ನಾನು ಮತ್ತು ರಾಹುಲ್‌ ಗಾಂಧಿ ಇಬ್ಬರೂ ಉತ್ಸವದಲ್ಲಿ ಭಾಗವಹಿಸುತ್ತಿದ್ದೇವೆ. ನಮ್ಮಲ್ಲಿ ಯಾವುದೇ ಬಣಗಳಿಲ್ಲ. ನಮ್ಮದು ಕಾಂಗ್ರೆಸ್ ಬಣ ಎಂದು ಡಿ.ಕೆ.ಶಿವಕುಮಾರ್‌ ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ಕೊಟ್ಟರು.

Share Post