Districts

ಚಿಕ್ಕೋಡಿಯಲ್ಲಿ ಭೀಕರ ಅಪಘಾತ – ಬೈಕ್‌ ಸವಾರರು ಸ್ಥಳದಲ್ಲೇ ಸಾವು

ಚಿಕ್ಕೋಡಿ : KSRTC ಬಸ್‌ ಮತ್ತು ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಾದವರು ಶ್ರೀಶೈಲ ಕೊರವಿ (27) ಮತ್ತು ಸಂತೋಷ್‌ ಹುಜರೆ (28) ಎಂದು ಗುರುತಿಸಲಾಗಿದೆ. ಇಬ್ಬರು ಚಿಕ್ಕೋಡಿಯ ನಿವಾಸಿಗಳಾಗಿದ್ದರು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೊರವಲಯದ ಕೆರೂರ ಕ್ರಾಸ್‌ ಬಳಿಯ ಚಿಕ್ಕೋಡಿ-ಮಿರಜ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. KSRTC ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಎದುರು ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಂಕಲಿಗೆ ಕೂಲಿಗೆ ತೆರಳುತ್ತಿದ್ದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತ ಸಂಭವಿಸಿದ ತಕ್ಷಣ ಬಸ್‌ ಬಿಟ್ಟು ಚಾಲಕ ಮತ್ತು ನಿರ್ವಾಹಕ ಪರಾರಿಯಾಗಿದ್ದಾರೆ, ಇನ್ನು ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಅಂಕಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

 

Share Post