CrimeDistricts

ಕಾಡಾನೆ ದಾಳಿಗೆ ಕಾರ್ಮಿಕ ಬಲಿ; ಅರಣ್ಯ ಇಲಾಖೆ ಎದುರು ಪ್ರತಿಭಟನೆ

ಚಿಕ್ಕಮಗಳೂರು; ಕಾಡಾನೆ ದಾಳಿಯಿಂದ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದು, ಆಕ್ರೋಶಗೊಂಡ ಜನರು ಅರಣ್ಯ ಇಲಾಖೆ ಮುಂದೆ ಮೃತದೇಹವಿಟ್ಟು ಪ್ರತಿಭಟಿಸಿರುವ ಘಟನೆ ಮೂಡಿಗೆರೆ ತಾಲ್ಲೂಕಿನಲ್ಲಿ ನಡೆದಿದೆ.

ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದಾಗಿ ಅರ್ಜುನ್‌ ಎಂಬ ಕಾರ್ಮಿಕರೊಬ್ಬರು ಮೃತಪಟ್ಟಿದ್ದರು. ಕಾಡಾನೆ ಹಾವಳಿ ಹೆಚ್ಚಾಗಿದ್ದು, ಕೂಡಲೇ ಅದನ್ನು ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿ ಅರಣ್ಯ ಇಲಾಖೆ ಎದುರು ಪ್ರತಿಭಟನೆ ನಡೆಸಿದ್ದಾರೆ.  ಪ್ರತಿಭಟನಾಕಾರರು ಅರಣ್ಯ ಇಲಾಖೆ ಎದುರು ಶವವನ್ನಿಟ್ಟು ಪ್ರತಿಭಟಿಸಿದರು. ಅಲ್ಲದೇ ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್‌ ನಡೆಸಿದ್ದಾರೆ.

Share Post