ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂಕುಸಿತʼ ವಾಹನ ಸಂಚಾರಕ್ಕೆ ಅಡ್ಡಿ
ಮೈಸೂರು; ಚಾಮುಂಡಿ ಬೆಟ್ಟದಲ್ಲಿ ಮತ್ತೆ ಮತ್ತೆ ಭೂಮಿ ಕುಸಿಯುತ್ತಿದೆ. ಇವತ್ತೂ ಕೂಡಾ ನಂದಿ ಮಾರ್ಗದ ರಸ್ತೆಯಲ್ಲಿ ಭೂಕುಸಿತ ಉಂಟಾಗಿದೆ. ಕಳೆದ ಎರಡು ವರ್ಷದಲ್ಲಿ ನಾಲ್ಕೈ ಬಾರಿ ಭೂಮಿ ಕುಸಿದಿದ್ದು, ಭಕ್ತರ ಆತಂಕಕ್ಕೆ ಕಾರಣವಾಗಿದೆ.
ಒಂದು ಕಡೆ ಭೂಮಿ ಕುಸಿತವಾಗಿದೆ. ಅದರ ಜೊತೆಗೆ ಇನ್ನೊಂದೆಡೆ ಭೂಮಿ ಬಿರುಕುಬಿಟ್ಟಿದೆ. ಹೀಗಾಗಿ ಬೆಟ್ಟಕ್ಕೆ ಹೋಗುವ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ.