CrimeDistricts

ಚಿಕ್ಕಮಗಳೂರು ಬಳಿ ಗ್ಯಾಸ್‌ ಸಿಲಿಂಡರ್‌ಗಳಿದ್ದ ಲಾರಿ ಪಲ್ಟಿ; ಏನಾಯ್ತು ಗೊತ್ತಾ..?

ಚಿಕ್ಕಮಗಳೂರು; ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ಗಳನ್ನು ತುಂಬಿದ್ದ ಕಾರಿಯೊಂದು ಪಲ್ಟಿಯಾಗಿದೆ. ಇದರಿಂದಾಗಿ ಸಿಲಿಂಡರ್‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಅದೃಷ್ಟಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಯಾವುದಾದರೂ ಸಿಲಿಂಡರ್‌ನಿಂದ ಗ್ಯಾಸ್‌ ಲೀಕ್‌ ಆಗಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದ್ರೆ ಅದೃಷ್ಟವಶಾತ್‌ ಏನೂ ಆಗಿಲ್ಲ.

ಕಳಸ ತಾಲೂಕಿನ ಬಾಳೆಹೊಳೆ ರಸ್ತೆಯ ಹಳುವಳ್ಳಿ ಸಮೀಪದ ಯಡ್ರಗೋಡು ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ದಟ್ಟ ಮಂಜು ಕವಿದಿದ್ದ ಕಾರಣ ರಸ್ತೆ ಕಾಣದೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ ಎಂದು ತಿಳಿದುಬಂದಿದೆ. ಭದ್ರಾವತಿಯಿಂದ ಭರ್ತಿ ಎಲ್‌ಪಿಜಿ ಸಿಲಿಂಡರ್‌ಗಳನ್ನ ಕಳಸಕ್ಕೆ ತರಲಾಗುತ್ತಿತ್ತು. ಈ ವೇಳೆ ಈ ದುರ್ಘಟನೆ ನಡೆದಿದೆ.

ರಸ್ತೆ ತಿರುವಿನಲ್ಲಿ ಚಾಲಕನಿಗೆ ದಾರಿ ಕಾಣದೇ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಆನಂದ್‌ಗೆ ಗಂಭೀರ ಗಾಯಗಳಾಗಿವೆ. ಆತನನ್ನು ಕಳಸ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಅಪಘಾತದ ಹಿನ್ನೆಲೆಯಲ್ಲಿ ಮತ್ತೊಂದು ವಾಹನದ ಮೂಲಕ ಸಿಲಿಂಡರ್‌ಗಳನ್ನು ಸಾಗಿಸಲಾಗಿದೆ.

 

Share Post