DistrictsPolitics

ಇಂದು ಅಥವಾ ನಾಳೆ ಮಾಡಾಳ್‌ ಅರೆಸ್ಟ್‌ ಆಗಬಹುದು; ಬಿಎಸ್‌ವೈ

ಕಲ್ಬುರ್ಗಿ; ಇಂದು ಅಥವಾ ನಾಳೆ ಮಾಡಾಳ್‌ ವಿರೂಪಾಕ್ಷಪ್ಪ ಅವರ ಬಂಧನವಾಗಬಹುದು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಜೇವರ್ಗಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಮಾಡಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಪುತ್ರ ನಲವತ್ತು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗಿ ಸಿಕ್ಕಿಬಿದ್ದಿದ್ದಾರೆ. ಈ ಪ್ರಕರಣದಲ್ಲಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರೇ ಎ೧ ಆರೋಪಿ. ಅವರ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ನಾವು ಯಾರನ್ನೂ ರಕ್ಷಿಸುವ ಕೆಲಸ ಮಾಡೋದಿಲ್ಲ. ತಪ್ಪು ಮಾಡಿದವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು. ಇಂದು ಅಥವಾ ನಾಳೆ ವಿರೂಪಾಕ್ಷಪ್ಪ ಅವರ ಬಂಧನವಾಗಲಿದೆ ಎಂದು ಯಡಿಯೂರಪ್ಪ ಹೇಳಿದರು.

Share Post