Districts

ಮೇಕೆದಾಟು ಆಯ್ತು..ಈಗ ಮಹದಾಯಿ ಪಾದಯಾತ್ರೆ:ಸತೀಶ್‌ ಜಾರಕಿಹೊಳಿ

ಬೆಳಗಾವಿ: ಮೊನ್ನೆಯಷ್ಟೇ ಜನರಿಗೆ ನೀರು ಒದಗಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕರು ಮೇಕೆದಾಟು ಪಾದಯಾತ್ರೆ ಕೈಗೊಂಡಿದ್ರು. ಕೊರೊನಾ ಹಿನ್ನೆಲೆ ಜನರ ಆರೋಗ್ಯದ ದೃಷ್ಟಿಯಿಂದ ಅದನ್ನು ಅರ್ಧಕ್ಕೆ ಕೈ ಬಿಟ್ಟರು. ಈಗ ಅದರಂತೆಯೇ ಮಹದಾಯಿಗಾಗಿ ಪಾದಯಾತ್ರೆ ನಡೆಸಲು ಚಿಂತನೆ ನಡೆಯುತ್ತಿದೆ. ಹೌದು ಮೇಕೆದಾಟು ಪಾದಯಾತ್ರೆಯಂತೆಯೇ ಮಹದಾಯಿಗಾಗಿ ಪಾದಯಾತ್ರೆ ಮಾಡೇ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ಮಹದಾಯಿ ಪಾದಯಾತ್ರೆ ಎಲ್ಲಿ?ಹೇಗೆ? ಯಾವ ರೀತಿ ಎಂದು ಏನೂ ನಿರ್ಧಾರವಾಗಿಲ್ಲ. ಇದರ ಬಗ್ಗೆ ನಮ್ಮ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಮೇಕೆದಾಟು ಪಾದಯಾತ್ರೆ ಸರ್ಕಾರದ ನಿದ್ದೆಗೆಡಿಸಿದೆ. ಕಾಂಗ್ರೆಸ್‌ ನಾಯಕರ ಹೋರಾಟ ವಿಫಲವಾಗಿಲ್ಲ, ಅದು ಸರ್ಕಾರದ ಗಮನ ಎಳೆಯುವಲ್ಲಿ ಯಶಸ್ವಿಯಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಮಹದಾಯಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಹೊರಡಿಸಿದ ಅಧಿಸೂಚನೆ ವಿರುದ್ಧ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಗೋವಾ ಪರ ಮುಕುಲ್ ರೋಹ್ಟಗಿ ವಾದ ಮಂಡಿಸಿ, ಕರ್ನಾಟಕದ ಯೋಜನೆಗಳಿಗೆ ಅನುಮತಿ ನೀಡದಂತೆ ಆಕ್ಷೇಪ ವ್ಯಕ್ತಪಡಿಸಿದರು. ನೀರು ಸಮುದ್ರ ಪಾಲಾಗುವುದನ್ನು ತಪ್ಪಿಸಿ ಜಲಾಶಯಕ್ಕೆ ಹರಿಸುವಂತೆ ಪಾದಯಾತ್ರೆ ಮಾಡುವುದಾಗಿ ಸತೀಶ್‌ ಜಾರಕಿಹೊಳಿ ಸೂಚನೆ ನೀಡಿದ್ರು.

 

Share Post