CrimeDistricts

ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ; ಕಾರಣ ಏನು ಗೊತ್ತಾ..?

ಮಂಡ್ಯ; ಮಂಡ್ಯ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾರೆಕುರ ಗ್ರಾಮದ ಬಳಿ ಈ ಕೃತ್ಯ ನಡೆದಿದೆ. ಅದೇ ಗ್ರಾಮದ ಯೋಗೇಶ್(34) ಎಂಬುವವರೇ ಹತ್ಯೆಯಾದವರು.

ಕಳೆದ ತಡರಾತ್ರಿ ಈ ಕೃತ್ಯ ಎಸಗಲಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಆದ್ರೆ ಘಟನೆ ಕಾರಣ ಇನ್ನೂ ತಿಳಿದುಬಂದಿಲ್ಲ. ಹಳೇ ವೈಷಮ್ಯವೇ ಕೊಲೆಗೆ ಕಾರಣ ಎಂದು ಹೇಳಲಾಗುತ್ತಿದೆ. ಯೋಗೇಶ್‌ ಅವರು ಪೈಂಟಿಂಗ್‌ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಈ ಬಗ್ಗೆ ಕೆಆರ್‌ಎಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

Share Post