ಚಾಕುವಿನಿಂದ ಇರಿದು ಅಪ್ರಾಪ್ತೆಯ ಕಿಡ್ನ್ಯಾಪ್ ಮಾಡಿದ ಯುವಕ
ರಾಮನಗರ; ಹಾಡಹಗಲೇ ಅಪ್ರಾಪ್ತೆಯೊಬ್ಬಳನ್ನು ಕಿಡ್ನ್ಯಾಪ್ ಮಾಡಲಾಗಿದೆ. ರಾಮನಗರದ ಐಬಿ ರಸ್ತೆಯ ಜ್ಯೂನಿಯರ್ ಕಾಲೇಜು ಬಳಿ ಈ ಘಟನೆ ನಡೆದಿದೆ.
ಅಪ್ರಾಪ್ತೆಯೊಬ್ಬಳ ಕಾಲೇಜಿನ ಬಳಿ ಬರುತ್ತಿದ್ದಾಗ ಯುವಕನೊಬ್ಬ ಚಾಕುವಿನಿಂದ ಇರಿದಿದ್ದಾನೆ. ಅನಂತರ, ಆಕೆಯನ್ನು ಕಾರಿನಲ್ಲಿ ಕೂರಿಸಿಕೊಂಡು ಕಿಡ್ನ್ಯಾಪ್ ಮಾಡಿದ್ದಾನೆ. ಇದನ್ನು ನೋಡಿದ ಸ್ಥಳೀಯರು ಬಾಲಕಿಯನ್ನು ರಕ್ಷಣೆ ಮಾಡಲು ಹೋಗಿದ್ದಾರೆ. ಕಾರಿನ ಮೇಲೆ ಜನರು ಕಲ್ಲೆಸದರೂ ಆತ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.
ಈ ಬಗ್ಗೆ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.