ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಚೇತರಿಸಿಕೊಂಡ ಉಗ್ರ ಶಾರೀಖ್ – ತನಿಖೆ ಚುರುಕು
ಮಂಗಳೂರು; ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟಿಸಿದ್ದ ಉಗ್ರ ಶಾರೀಖ್ ಆಸ್ಪತ್ರೆಯಲ್ಲಿ ಬಹುತೇಕ ಚೇತರಿಸಿಕೊಂಡಿದ್ದಾನೆ. ಆತ ಓಡಾಡುವ ಸ್ಥಿತಿಯಲ್ಲಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಎನ್ಐಎ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಉಗ್ರ ಶಾರೀಖ್ನನ್ನು ವಿಚಾರಣೆಗೊಳಪಡಿಸಲು ಎನ್ಐಎ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.
ಶಾರೀಕ್ ಆರೋಗ್ಯದಲ್ಲಿ ಶೇ. 80ರಷ್ಟು ಚೇತರಿಕೆ ಕಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ, ಕಮಕನಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಶಾರೀಖ್ ಚಿಕಿತ್ಸೆ ಪಡೆಯುತ್ತಿದ್ದಾನೆ. ವೈದ್ಯರು ಸಮ್ಮತಿ ಕೊಟ್ಟರೆ ಎನ್ಐಎ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ.