ಮೆಡಿಕಲ್ ಕಾಲೇಜಿನ ೨೧ ವಿದ್ಯಾರ್ಥಿಗಳಿಗೆ ಕೊರೋನಾ
ಬಳ್ಳಾರಿ: ರಾಜ್ಯದಲ್ಲಿ ಕೊರೋನಾ ಹಾಗೂ ರೂಪಾಂತರಿ ತಳಿ ಒಮಿಕ್ರಾನ್ ಹಾವಳಿಯಿಂದ ಜನರಿಗೆ ಆತಂಕ ಎದುರಾಗಿದೆ. ದಿನದಿಂದ ದಿನಕ್ಕೆ ಕೊರೋನಾ ಸೋಂಕು ಜಾಸ್ತಿಯಾಗಿದೆ. ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚು ಕೊರೋನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಇದರಿಂದ ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಇದೀಗ ಬಳ್ಳಾರಿ ಜಿಲ್ಲೆಯ ವಿಜಯನಗರದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇವರು ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ೨೧ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ಅಧಿಕಾರಿಗಳು ತಿಳಿಸಿದ್ದಾರೆ. ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳಿಗೆ ಸ್ವಲ್ಪ ಜ್ವರ, ಶೀತದಲಕ್ಷಣ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಹಾಸ್ಟೆಲ್ ನಲ್ಲಿದ್ದ ೨೫೦ ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿತ್ತು ಈ ಪೈಕಿ ೨೧ ಜನರಿಗೆ ಕೊರೋನಾ ತಗಲಿರುವುದು ತಿಳಿದುಬಂದಿದೆ.
ಸದ್ಯ ಸೋಂಕಿತರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.