Districts

27 ಪುಂಡರಿಗೆ ನ್ಯಾಯಾಂಗ ಬಂಧನ

ಬೆಳಗಾವಿ: ಬೆಳಗಾವಿಯ ವಿವಿಧ ಕಡೆ ನಿನ್ನೆ ತಡರಾತ್ರಿ ಎಂಇಎಸ್‌ ಪುಂಡರು ಹಲವು ವಾಹನಗಳು ಹಾಗೂ ಕಟ್ಟಡಗಳ ಮೇಲೆ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ  ಪ್ರಕರಣಕ್ಕೆ ಸಂಬಂಧಿಸಿದಂತೆ 27 ಮಂದಿಯನ್ನು ಬಂಧಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಘಟನೆ ಸಂಬಂಧ ಕ್ಯಾಂಪ್ ಹಾಗೂ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ.

ರಾತ್ರಿ ನಡೆದ ಕೃತ್ಯದಿಂದಾಗಿ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹಗಳು ಕೇಳಿಬರುತ್ತಿವೆ. ಈ ಬಗ್ಗೆ ಪೊಲೀಸರು ಕೂಡಾ ತನಿಖೆ ತೀವ್ರಗೊಳಿಸಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಬೆಳಗಾವಿಯ ರಾಣಿ ಚನ್ನಮ್ಮ ವೃತ್ತ, ಧರ್ಮವೀರ ಸಂಭಾಜಿ ವೃತ್ತದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಇನ್ನು,‌ ಅನಗೋಳದ ಕನಕದಾಸ ಕಾಲೊನಿಯಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಲಾಗಿತ್ತು. ಪ್ರತಿಮೆ ಭಗ್ನಗೊಳಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ  ರಾಯಣ್ಣನ ಅಭಿಮಾನಿಗಳು ಚನ್ನಮ್ಮ ವೃತ್ತದ ಕನ್ನಡ ಸಾಹಿತ್ಯ ಭವನದ ಆವರಣದಲ್ಲಿ ಜಮಾಯಿಸಿದ್ದರು.

 

Share Post