ಶಾಲಾ ಮಕ್ಕಳಿಂದ ನೂರು ರೂಪಾಯಿ ದೇಣಿಗೆ; ಸಮರ್ಥಿಸಿಕೊಂಡ ಸಚಿವರು
ಮೈಸೂರು; ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಗತ್ಯವಿರುವ ಖರ್ಚು–ವೆಚ್ಚಗಳಿಗಾಗಿ ಪೋಷಕರಿಂದ ದೇಣಿಗೆ ಸಂಗ್ರಹಿಸಲು ನಿರ್ಧರಿಸಲಾಗಿದೆ ಪ್ರತಿ ತಿಂಗಳು ಪೋಷಕರಿಂದ 100 ರೂಪಾಯಿ ಸಂಗ್ರಹಿಸಲು ಎಸ್‌ಡಿಎಂಸಿಗಳಿಗೆ ಶಿಕ್ಷಣ ಇಲಾಖೆ ಆಯುಕ್ತರು ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ. ಇದನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಸಮರ್ಥಿಸಿಕೊಂಡಿದ್ದಾರೆ.
ಇದರಲ್ಲಿ ನನ್ನದಾಗಲಿ ಅಥವಾ ಮುಖ್ಯಮಂತ್ರಿಯದ್ದಾಗಲಿ ಯಾವಯದೇ ಪಾತ್ರವಿಲ್ಲ. ಆದ್ರೆ ಪೋಷಕರಿಂದ ದೇಣಿಗೆ ಸಂಗ್ರಹಿಸಲು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಅಡಿ ಅವಕಾಶ ಇದೆ. ಹೀಗಾಗಿ ಎಸ್‌ಡಿಎಂಸಿಗಳ ಮನವಿ ಮೇರೆಗೆ ಶಿಕ್ಷಣ ಇಲಾಖೆ ಆಯುಕ್ತರು ಅನುಮತಿ ನೀಡಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಸುತ್ತೋಲೆ ಹೊರಡಿಸುವುದಕ್ಕೆ ಅಧಿಕಾರಿಗಳಿಗೆ ತಮ್ಮದೇ ಆದ ಅಧಿಕಾರವಿದೆ. ಎಲ್ಲಾ ಸುತ್ತೋಲೆಗಳನ್ನೂ ಸರ್ಕಾರದ ಗಮನಕ್ಕೆ ತರಲೇಬೇಕು ಎಂದೇನೂ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದ್ದಾರೆ.