Districts

ನಾಲ್ಕು ಸ್ಥಾನ ಇದೆ, ಅದಕ್ಕಾಗಿ ಪೈಪೋಟಿ ನಡೆದಿದೆ; ಸಚಿವ ಈಶ್ವರಪ್ಪ

ಶಿವಮೊಗ್ಗ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚಣೆ ವಿಚಾರ ನನಗೆ ಗೊತ್ತಿಲ್ಲ. ಇದು ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಜ್ಯ ಸಂಪುಟದಲ್ಲಿ ನಾಲ್ಕು ಸ್ಥಾನ ಖಾಲಿ ಇದೆ. ಅದಕ್ಕಾಗಿ ಪೈಪೋಟಿ ಇದೆ ಎಂದು ಹೇಳಿದರು.

ಇನ್ನು ಇಂದು ಬೆಳಗ್ಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿಯವರು ಗೋವಾದಲ್ಲಿ ದೇವೇಂದ್ರ ಫಡ್ನವಿಸ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಈಶ್ವರಪ್ಪ ಅವರು, ಯಾರ್ಯಾರು ಯಾಕೆ ಹೋಗುತ್ತಾರೆ ಎಂಬುದು ನನಗೆ ಗೊತ್ತಿಲ್ಲ. ಫಡ್ನವಿಸ್‌ ನಮ್ಮ ಪಕ್ಷದ ನಾಯಕರು, ಅವರೊಂದಿಗೆ ಚರ್ಚೆ ಮಾಡಿದ್ದಾರೆ ಎಂದರು.

 

Share Post