Districts

ಖಾಸಗಿ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ ಶಾಸಕ

ಬೀದರ್‌: ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದ ಶಾಸಕ ಶರಣು ಸಲಗಾರ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ಬಿಂದಾಸ್‌ ಆಗಿ ಸ್ಟೆಪ್ ಹಾಕಿದ್ದಾರೆ.ಶಾಸಕರಲ್ಲಿದ್ದ ಟೆನ್ಷನ್‌ ಬದಿಗಿಟ್ಟು ಬೆಂಬಲಿಗರೊಂದಿಗೆ ಇಂಗ್ಲೀಷ್‌ ಹಾಡಿಗೆ ಹೆಜ್ಜೆ ಇಟ್ಟಿದ್ದಾರೆ.ಇದೀಗ ಶಾಸಕರ ಡ್ಯಾನ್ಸ್‌ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದು, ಚರ್ಚೆಗೆ ಕಾರಣವಾಗಿದೆ. ಶಾಸಕರ ವಿರುದ್ಧ ಬಸವಕಲ್ಯಾಣ ಗ್ರಾಮಸ್ಥರು ಗರಂ ಆಗಿದ್ದಾರೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಹತ್ತು ಹಲವಾರು ಸಮಸ್ಯೆಗಳಿವೆ. ಆ ಸಮಸ್ಯೆಗಳು ಆಲಿಸುವ ಬದಲು ಬಿಂದಾಸ್‌ ಆಗಿ ಡಾನ್ಸ್ ಮಾಡುತ್ತಿರುವ ಎಷ್ಟರ ಮಟ್ಟಿಗೆ ಸರಿ?? ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡಿಲ್ಲ. ಈ ಬಗ್ಗೆ ಶಾಸಕರ ಬಳಿ ಹೇಳಿದರೂ ಏನು ಪ್ರಯೋಜನೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶರಣರಪುಣ್ಯ ಕ್ಷೇತ್ರದಲ್ಲಿ ಶಾಸಕರ ಈ ನಡೆಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

Share Post