ಶಾಸಕ ಆರ್.ವಿ.ದೇಶಪಾಂಡೆ ಈ ವರ್ಷದ ಅತ್ಯುತ್ತಮ ಶಾಸಕ
ಬೆಳಗಾವಿ; 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಸುವರ್ಣ ವಿಧಾನಸೌಧದಲ್ಲಿ ಈ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಹಳಿಯಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್.ವಿ.ದೇಶಪಾಂಡೆ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
75 ವರ್ಷ ವಯಸ್ಸಿನ ಆರ್.ವಿ.ದೇಶಪಾಂಡೆ 9 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ದೇಶಪಾಂಡೆ ಅವರು ತಮ್ಮ ಹುಟ್ಟೂರಾದ ಹಳಿಯಾಳ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.