Districts

ಕಲ್ಲು ಹೊಡೆದವರ ಬೆಂಬಲಕ್ಕೆ ನಿಂತರಾ ಜಮೀರ್‌ ಅಹ್ಮದ್..?‌

ಬೆಂಗಳೂರು: ಹುಬ್ಬಳ್ಳಿಯಲ್ಲಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ಹೊಡೆದವರ ಬೆಂಬಲಕ್ಕೆ ಶಾಸಕ ಜಮೀರ್‌ ಅಹ್ಮದ್‌ ನಿಂತರಾ..? ಹುಬ್ಬಳ್ಳಿ ಜನ ಹೀಗೊಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಯಾಕೆಂದ್ರೆ ಹುಬ್ಬಳ್ಳಿಯಲ್ಲಿ ಕಲ್ಲು ಹೊಡೆದವರಿಗೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್‌ ರಂಜಾನ್‌ ಹಬ್ಬಕ್ಕಾಗಿ ಸಹಾಯ ಮಾಡುತ್ತಿದ್ದಾರಂತೆ.

ಜಮೀರ್ 5 ಸಾವಿರ ರೂಪಾಯಿ ನಗದು ಹಾಗೂ ರಂಜಾನ್ ಫುಡ್‍ಕಿಟ್ ನೀಡುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬಂಧನಕ್ಕೊಳಗಾದವರ ಕುಟುಂಬಗಳಿಗೆ ಜಮೀರ್ ಸಹಾಯ ಮಾಡಲು ತೀರ್ಮಾನಿಸಿದ್ದಾರೆ. ಇಂದು ಮಧ್ಯಾಹ್ನ 3.30ಕ್ಕೆ ಹುಬ್ಬಳ್ಳಿಯಲ್ಲಿ ಹಣ ಹಾಗೂ ಫುಡ್‍ಕಿಟ್ ಹಂಚಿಕೆ ಮಾಡಲಾಗುತ್ತಿದ್ದು, ಕಸಬಾ ಪೇಟೆ ಪೊಲೀಸ್ ಠಾಣೆ ಬಳಿಯ ಮಸ್ತಾನ್ ಷಾ ಶಾದಿ ಮಹಲ್‍ನಲ್ಲಿ ಬೆಂಬಲಿಗರ ಮೂಲಕ ಜಮೀರ್ ಅಹ್ಮದ್ ಸಹಾಯ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ರಂಜಾನ್ ಹಿನ್ನೆಲೆ ಮೆಕ್ಕಾದಲ್ಲಿರುವ ಜಮೀರ್ ಅಹ್ಮದ್, ಅವರ ಬೆಂಬಲಿಗರ ಮೂಲಕ ಇಲ್ಲಿ ನೆರವು ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಇನ್ನು ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಶಾಸಕ ಜಮೀರ್ ಅಹ್ಮದ್, ರಂಜಾನ್ ಹಬ್ಬದ ಸಮಯದಲ್ಲಿ ಪವಿತ್ರ ನಮಾಜ್ ವೇಳೆ ತಪ್ಪು ಮಾಡಿರುವವರಿಗೆ ಶಿಕ್ಷೆಯಾಗಲಿ. ಜೊತೆಗೆ ಮತ್ತೊಮ್ಮೆ ತಪ್ಪು ಮಾಡದಂತೆ ಬುದ್ಧಿ ನೀಡಲೆಂದು ಅಲ್ಲಾಹ್ ಹಾಗೂ ದೇವರಲ್ಲಿ ಪ್ರಾರ್ಥಿಸುತ್ತೇನೆ. ನಾನು ಮೆಕ್ಕಾದಲ್ಲಿ ಪವಿತ್ರ ರಂಜಾನ್ ಆಚರಣೆ ಸೇವೆಯಲ್ಲಿ ತೊಡಗಿದ್ದೇನೆ. ಮನೆಯಲ್ಲಿ ದುಡಿಯುವ ಗಂಡಸರು ಇಲ್ಲದ ಹಿನ್ನೆಲೆಯಲ್ಲಿ ತಾಯಂದಿರಿಗೆ‌, ಪುಟ್ಟ ಮಕ್ಕಳಿಗೆ ಸಹಾಯಹಸ್ತ. ಈ ಸಹಾಯ ಹಸ್ತ ಯಾವುದೇ ಬೇರೆ ಅರ್ಥ ಕಲ್ಪಿಸುವುದು ಬೇಡ. ತಪ್ಪು ಮಾಡಿದವರು ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ನೀಡುವ ಶಿಕ್ಷೆಗೆ ಒಳಪಡಲಿ. ನನ್ನ ಸಹಾಯಹಸ್ತ ಯಾವುದೇ ರೀತಿಯ ತಪ್ಪಿತಸ್ಥರಿಗೆ ಸಹಾಯ ಅಲ್ಲ ಹಾಗೂ ಉತ್ತೇಜನವೂ ಅಲ್ಲ ಎಂದು ತಿಳಿಸಿದ್ದಾರೆ.

Share Post