CrimeDistricts

ಶಾಸಕರ ಕಾರು ಡಿಕ್ಕಿ; ಕೊಪ್ಪಳ ಬಳಿ ವೃದ್ಧೆ ಸಾವು

ಕೊಪ್ಪಳ; ಶಾಸಕರ ಕಾರು ಡಿಕ್ಕಿಯಾಗಿ ವೃದ್ದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕಾರಟಗಿ ತಾಲೂಕಿನ ಮೈಲಾಪುರ ಕ್ರಾಸ್ ಸಮೀಪ ನಡೆದಿದೆ. ಶಾಸಕ ಬಸವರಾಜ ದಡೇಸುಗೂರು ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ದ ಮಹಿಳೆ ಮರಿಯಮ್ಮ ನಾಯಕ (65) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೈಲಾಪುರ ಬಸ್ ನಿಲ್ದಾಣ ಬಳಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಶಾಸಕ ಬಸವರಾಜ ದಡೇಸುಗೂರು ಕಾರು ಡಿಕ್ಕಿ ಹೊಡೆದಿದೆ. ಚಾಲಕ ನಿಯಂತ್ರಣ ಕಳೆದುಕೊಂಡು ವೃದ್ಧೆಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಗಾಯಾಳು ಮಹಿಳೆಯನ್ನು ಕಾರಟಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿತ್ತಾದ್ರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Share Post