ಹುಬ್ಬಳ್ಳಿ; ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಮೊದಲಿಗೆ ಸಿದ್ಧೇಶ್ವರ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಹುಬ್ಬಳ್ಳಿಯಲ್ಲಿ ರೈಲ್ವೇ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಮೋದಿಯವರನ್ನು ನೋಡಲು ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದಾರೆ.