Monkey Pox; 14 ದಿನಗಳಲ್ಲಿ 37 ಮಂದಿಗೆ ಮಂಗನ ಕಾಯಿಲೆ!
ಉತ್ತರ ಕನ್ನಡ; ರಾಜ್ಯದಲ್ಲಿ ಮಂಗನ ಕಾಯಿಲೆ ಭೀತಿಯನ್ನುಂಟು ಮಾಡುತ್ತಿದೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಇದರ ಕಾಟಕ್ಕೆ ಜನ ಬೆಚ್ಚಿಬಿದ್ದಿದ್ದಾರೆ. ಕಳೆದ ಎರಡು ವಾರದಿಂದ ಮಂಗನ ಕಾಯಿಲೆಗೆ ತುತ್ತಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆತಂಕದ ವಿಚಾರ ಅಂದ್ರೆ ಕಳೆದ 14 ದಿನಗಳಲ್ಲಿ 37 ಮಂದಿಗೆ ಸೋಂಕು ತಗುಲಿದೆ. ಎಲ್ಲರೂ ಕೂಡಾ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರವಾರದ ಸರ್ಕಾರಿ ಆಸ್ಪತ್ರೆಯಲ್ಲಿ 16 ಮಂದಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ ಇತರ ಐವರು ರೋಗಿಗಳು ಮಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗೆ ಒಟ್ಟು 22 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಚೇತರಿಸಿಕೊಳ್ಳುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸದ್ಯ ಸುಮಾರು 34 ಮಂದಿ ಮಂಗನ ಕಾಯಿಲೆಯಿಂದ ಬಳಲುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 12 ಮಂದಿಗೆ ಮಂಗನ ಕಾಯಿಲೆ ಬಂದಿದೆ. ಇನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಬ್ಬರಿಗೆ ಈ ಕಾಯಿಲೆ ವಕ್ಕರಿಸಿದೆ.
ಸಿದ್ದಾಪುರದಲ್ಲಿ ಮೂರು ಮಂಗಳ ಸಾವು!
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನಲ್ಲಿ ಮಂಗನ ಕಾಯಿಲೆ ಹೆಚ್ಚು ಬಾಧಿಸುತ್ತಿದೆ. ಸಿದ್ದಾಪುರದಲ್ಲಿ ಮೂರು ಮಂಗಗಳು ಸಾವನ್ನಪ್ಪಿದ್ದು, ಇದರಿಂದ ಮತ್ತಷ್ಟು ಆತಂಕ ಹೆಚ್ಚಾಗಿದೆ. ಜನರು ತೋಟ, ಹೊಲದಲ್ಲಿ ಓಡಾಡುವುದಕ್ಕೇ ಹೆದರುತ್ತಿದ್ದಾರೆ. ಜನರು ಅನಾರೋಗ್ಯಕ್ಕೀಡಾದರೆ ಅವರಿಗೆ ಎಂಡಮಿಕ್ ಪರೀಕ್ಷೆ ಮಾಡಿಸಲಾಗುತ್ತಿದೆ. ಅದರಲ್ಲಿ ಪಾಸಿಟಿವ್ ಬಂದರೆ, ಅಂತಹವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡುವ ಕೆಲಸ ನಡೆಯುತ್ತಿದೆ.
ಶಿವಮೊಗ್ಗದಲ್ಲಿ ಹೆಚ್ಚಿದ್ದ ಮಂಗನ ಕಾಯಿಲೆ!
ಕೆಲ ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿತ್ತು. ಈ ಬಾರಿ ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರಿಗೂ ಕಾಲಿಟ್ಟಿದೆ. ಇದು ಬೇರೆ ಜಿಲ್ಲೆಗಳಿಗೂ ಹರಡುವ ಭೀತಿ ಇದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಾಕಷ್ಟಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.