ನೈತಿಕ ಪೊಲೀಸ್ ಗಿರಿ; ಗಡಿಪಾರಾಗ್ತಾರಾ ಬಜರಂಗದಳದ ಕಾರ್ಯಕರ್ತರು..?
ಮಂಗಳೂರು; ನೈತಿಕ ಪೊಲೀಸ್ ಗಿರಿ ನಡೆಸಿದ್ದ ಆರೋಪದ ಮೇಲೆ ಮೂವರು ಭಜರಂಗದಳದ ಕಾರ್ಯಕರ್ತರನ್ನು ಗಡಿಪಾರು ಮಾಡಲು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು ಚಿಂತನೆ ನಡೆಸಿದ್ದಾರೆ. ನಿಮ್ಮನ್ನು ನಾವು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ಮೂವರಿಗೆ ನೋಟಿಸ್ ನೀಡಲಾಗಿದೆ.
ಕಾನೂನು ಸುವ್ಯವಸ್ಥೆ ಖಾತ್ರಿಪಡಿಸೋದಕ್ಕಾಗಿ ಡಿಸಿಪಿ ಎದುರು ಹಾಜರಾಗುವಂತೆಯೇ ಭಜರಂಗದಳದ ಮೂವರು ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ. ಮೂವರನ್ನೂ ಒಂದು ವರ್ಷದ ಅವಧಿಗೆ ಜಿಲ್ಲೆಯಿಂದ ಗಡಿಪಾರು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ಪೊಲೀಸ್ ಕಮಿಷನರ್ ಕುಲದೀಪ್ ಜೈನ್, ಪದೇ ಪದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ನಮಗೆ ಅವರು ಆರೋಪಿಗಳಷ್ಟೇ, ಅವರು ಯಾವ ಸಂಘಟನೆ ಅನ್ನೋದು ಮುಖ್ಯವಲ್ಲ ಎಂದು ಹೇಳಿದ್ದಾರೆ.
ಬರೀ ಮೂವರು ಪಾತ್ರವಲ್ಲ. ಇನ್ನೂ ಹಲವಾರು ಮಂದಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದೂ ಅವರು ಹೇಳಿದ್ದಾರೆ.