DistrictsEconomy

ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ; ಪ್ರಧಾನಿ ನರೇಂದ್ರ ಮೋದಿ

ಮಂಗಳೂರು; ಎಂಟು ವರ್ಷಗಳ ನಮ್ಮ ಆಡಳಿತದ ಅವಧಿಯಲ್ಲಿ ಮೂಲ ಸೌಕರ್ಯ ಅಬಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಂಗಳೂರಿನಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಎಲ್ಲರ ಶಕ್ತಿ ಹೆಚ್ಚಿಸುವ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ದೇಶದ ಸೈನ್ಯ ಮತ್ತು ಆರ್ಥಿಕತೆ ವಿಚಾರದಲ್ಲಿ ಭಾರತ ದೊಡ್ಡ ಮುನ್ನಡೆ ಸಾಧಿಸುತ್ತಿದೆ ಎಂದು ಹೇಳಿದರು.

ಮೇಕ್‌ ಇನ್‌ ಇಂಡಿಯಾ ಬಲಪಡಿಸಬೇಕು. ಅಭಿವೃದ್ಧಿ ಭಾರತದ ನಿರ್ಮಾಣವಾಗಬೇಕಾದರೆ ಅಭಿವೃದ್ಧಿ ವಲಯ ಬಲಪಡಿಸಬೇಕು. ಈ ನಿಟ್ಟಿನಲ್ಲಿ ನಾವು ಕ್ರಮ ಕೈಗೊಂಡಿದ್ದೇವೆ. ೮ ವರ್ಷಗಳಿಂದ ಮೂಲ ಸೌಕರ್ಯ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳಾಗಿವೆ. ಕರ್ನಾಟಕದಲ್ಲಿ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದೇವೆ. ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿ 7೦ ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಸಾಗರ ಮಾಲಾದಿಂದ ಕರಾವಳಿ ಭಾರತಕ್ಕೆ ಶಕ್ತಿ ಸಿಗುತ್ತಿದೆ. ಎಂಟು ವರ್ಷಗಳಲ್ಲಿ ಕರ್ನಾಟಕದಲ್ಲಿ ಹಲವಾರು ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನ ನಡೆಸಲಾಗಿದೆ ಎಂದು ಮೋದಿ ಹೇಳಿದ್ದಾರೆ.

ಡಬಲ್‌ ಎಂಜಿನ್‌ ಸರ್ಕಾರ ಜನ ಅಶೋತ್ತರಗಳಿಗೆ ಸ್ಪಂದಿಸುತ್ತಿದೆ. ಜನರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಮೀನುಗಾರರ ಅಭಿವೃದ್ಧಿ ಡಬಲ್‌ ಎಂಜಿನ್‌ ಸರ್ಕಾರ ಪ್ರಯತ್ನ ಮಾಡುತ್ತಿದೆ. ದೇಶದ ಆಕಾಂಕ್ಷೆ ವಿಶ್ವದರ್ಜೆಯ ಮೂಲ ಸೌಕರ್ಯ ಪಡೆಯವುದಾಗಿದೆ. ಅದನ್ನು ಒದಗಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಮೋದಿ ಹೇಳಿದರು.

Share Post