CrimeDistricts

ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ; ಇಬ್ಬರು ಸವಾರರೂ ಸಾವು..!

ಚಿಕ್ಕೋಡಿ; ರಸ್ತೆ ಪಕ್ಕ ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್‌ ಸವಾರರಿಬ್ಬರೂ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ರಕ್ಷಿ-ಶಿರಗಾಂವ ರಸ್ತೆಯಲ್ಲಿ ನಡೆದಿದೆ.

ಸವದತ್ತಿ ತಾಲೂಕಿನ ಚಚಡಿ ಗ್ರಾಮದ ಮಲ್ಲನಗೌಡ ಯಲ್ಲನಗೌಡ ಪಾಟೀಲ್ (21) ಹಾಗೂ ಸಿದ್ಧಾರೂಢ ವೀರಭದ್ರ ಕರೋಶಿ (24) ಮೃತ ಯುವಕರು. ಇವರಿಬ್ಬರೂ ರಕ್ಷಿ ಕಡೆಯಿಂದ ಶಿರಗಾಂವ ಗ್ರಾಮಕ್ಕೆ ತೆರಳುತ್ತಿದ್ದರು. ಬೈಕ್‍ನಲ್ಲಿ ವೇಗವಾಗಿ ಹೋಗುತ್ತಿದ್ದ ವೇಳೆ ರಸ್ತೆ ಬದಿ ಟ್ರ್ಯಾಕ್ಟರ್ ನಿಲ್ಲಿಸಿರುವುದನ್ನು ಗಮನಿಸದೇ ಡಿಕ್ಕಿ ಹೊಡೆದಿದ್ದಾರೆ.

ಇಬ್ಬರ ತಲೆಗೂ ಗಂಭೀರವಾಗಿ ಪೆಟ್ಟು ಬಿದ್ದಿತ್ತು. ಕೂಡಲೇ ಸ್ಥಳೀಯರು ಆಂಬುಲೆನ್ಸ್‌ ಕರೆಸಿ ಆಸ್ಪತ್ರೆಗೆ ರವಾನಿಸಿದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಸಾವನ್ನಪ್ಪಿದ್ದಾರೆ.

Share Post