DistrictsPolitics

ಮಾಗಡಿಯಲ್ಲಿ ಬಿಜೆಪಿಗೆ ಠೇವಣಿ ಬಂದರೆ ದೀರ್ಘದಂಡ ನಮಸ್ಕಾರ; ಡಿ.ಕೆ.ಸುರೇಶ್‌

ರಾಮನಗರ; ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ ಅವರು ಮಾಗಡಿ ತಾಲ್ಲೂಕಿನವರೇ ಆಗಿದ್ದಾರೆ. ಮಾಗಡಿ ಕ್ಷೇತ್ರದಲ್ಲಿ  ಬಿಜೆಪಿ ಠೇವಣಿ ತೆಗೆದುಕೊಂಡರೆ ಮಾಗಡಿ ಬಸ್‌ ನಿಲ್ದಾಣದ ಬಳಿ ದೀರ್ಘದಂಡ ನಮಸ್ಕಾರ ಮಾಡುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಮಾಗಡಿಯಲ್ಲಿ ಮಾತನಾಡಿದ ಅವರು, ಅಶ್ವತ್ಥನಾರಾಯಣ ಅವರು ಬಿಜೆಪಿ ಸಂಘಟನೆ ಮಾಡುತ್ತಿಲ್ಲ. ಅವರ ಸಂಬಂಧಿಕರೇ ಜೆಡಿಎಸ್‌ ಪಕ್ಷದಲ್ಲಿದ್ದಾರೆ. ಈಗ ಹರಕೆ ಕುರಿ ಪ್ರಸಾದ್‌ಗೌಡರನ್ನು ಬಿಜೆಪಿ ಪಕ್ಷದಿಂದ ನಿಲ್ಲಿಸುತ್ತಿದ್ದಾರೆ. ಅವರಿಗೆ ಠೇವಣಿ ಬರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇನ್ನೊಂದೆಡೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ಜೆಡಿಎಸ್‌ ಪಕ್ಷ ಸುಳ್ಳು ಉತ್ಪಾದಿಸುವ ಕಾರ್ಖಾನೆ ಎಂದು ಟೀಕೆ ಮಾಡಿದ್ದಾರೆ.

 

Share Post