Districts

ಪಠ್ಯಪರಿಷ್ಕರಣೆಯಲ್ಲಿ ಎಡವಿರುವುದು ಸತ್ಯ; ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್‌

ಚಾಮರಾಜನಗರ; ಪಠ್ಯಪುಸ್ತಕ ಪರಿಷ್ಕರಣ ಸಮಿತಿಯು ಎಡವಿರುವುದು ಸತ್ಯ ಎಂದು ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್‌ ಒಪ್ಪಿಕೊಂಡಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್‌ ಅವರ ಪಠ್ಯದಿಂದ ಸಂವಿಧಾನ ಶಿಲ್ಪಿ ಎಂಬ ಪದವನ್ನು ತೆಗೆಯಲಾಗಿದೆ. ಬಸವಣ್ಣ ಅವರ ಬಗ್ಗೆ ತಪ್ಪಾಗಿ ಬರೆಯಲಾಗಿದೆ. ಆಗಿರುವ ತಪ್ಪುಗಳನ್ನು ಸರಿಪಡಿಸುವುದಾಗಿ ಈಗಾಗಲೇ ಮುಖ್ಯಮಂತ್ರಿ ಹೇಳಿದ್ದಾರೆ ಎಂದರು

ಪಠ್ಯಪುಸ್ತಕಗಳು ಯಾವ ರೀತಿ ಇರಬೇಕು ಎಂಬುದನ್ನು ನಾನು ಮೊದಲೇ ಹೇಳಿದ್ದೆ. ಪಠ್ಯದಲ್ಲಿ ವಾಸ್ತವಿಕ ಅಂಶಗಳು ಇರಬೇಕು. ವೈಜ್ಞಾನಿಕ ರೀತಿಯಲ್ಲಿರಬೇಕು. ಮಕ್ಕಳಿಗೆ ಅರ್ಥವಾಗುವಂತೆ ಇರಬೇಕು. ಅವರ ಮನಸ್ಸಿನ ಮೇಲೆ ಪರಿಣಾಮ ಬೀರಬೇಕು. ಚಿಂತನೆಗೆ ಹಚ್ಚುವ ರೀತಿಯಲ್ಲಿ ಇರಬೇಕು ಎಂದು ಶ್ರೀನಿವಾಸ ಪ್ರಸಾದ್‌ ಇದೇ ಸಂದರ್ಭದಲ್ಲಿ ತಿಳಿಸಿದರು.

Share Post