Districts

ಕ್ಷುಲ್ಲಕ ಕಾರಣಕ್ಕೆ ಜಗಳ; ಮಚ್ಚಿನಿಂದ ಮಹಿಳೆ ಕೊಲೆ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಮಚ್ಚಿನಿಂದ ಹಲ್ಲೆ ಮಾಡಿ, ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಇಲ್ಲಿನ ಉದಯಗಿರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸುನಿತಾ ಎಂಬ ಮಹಿಳೆ ಸಾವ್ನ್ನಪ್ಪಿದ್ದಾರೆ.

ಗಿರೀಶ್‌ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಭಾರತಿ ಎಂಬುವವರು ಕೂಡಾ ಭಾರತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಭಾರತಿಯವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ಬಗ್ಗೆ ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post