ಮುರುಘಾ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ
ಚಿತ್ರದುರ್ಗ; ಪೋಕ್ಸೋ ಕೇಸ್ ಸಂಬಂಧ ಚಿತ್ರದುರ್ಗ ಮುರುಘಾ ಶರಣರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ. ಶಿವಮೂರ್ತಿ ಶರಣರು ನಿರೀಕ್ಷಣಾ ಜಾಮೀನು ಕೋರಿ ಎರಡು ದಿನದ ಹಿಂದೆ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ 1ನೇ ಸೆಷನ್ಸ್ ಕೋರ್ಟ್, ಆಕ್ಷೇಪಣೆ ಸಲ್ಲಿಸುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಸೂಚಿಸಿ, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಇಬ್ಬರು ವಿದ್ಯಾರ್ಥಿನಿಯರು ಶ್ರೀಗಳ ವಿರುದ್ಧ ಅತ್ಯಾಚಾರ ಕೇಸ್ ದಾಖಲಿಸಿದ್ದಾರೆ. ಶ್ರೀಗಳ ವಿರುದ್ಧ ಪೋಕ್ಸೋ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಕೇಸ್‌ಗಳು ದಾಖಲಾಗಿವೆ. ಈ ಸಂಬಂಧ ಶ್ರೀಗಳು ಬಂಧನದ ಭೀತಿ ಎದುರಿಸುತ್ತಿದ್ದು, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.