DistrictsPolitics

ನನ್ನ ಮೌನವೂ ವೀಕ್ನೆಸ್‌ ಅಲ್ಲ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ; ನನ್ನ ಮೌನವೂ ವೀಕ್ನೆಸ್ ಅಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಇತ್ತೀಚೆಗೆ ಸಚಿವ ಸತೀಶ್‌ ಜಾರಕಿಹೊಳಿ ನನ್ನ ಮೌನವೇ ನನ್ನ ವೀಕ್ನೆಸ್‌ ಎಂದುಕೊಂಡಿದ್ದಾರೆ ಎಂದು ಹೇಳಿದ್ದರು. ಹೀಗಾಗಿ ಹೆಬ್ಬಾಳ್ಕರ್‌ರ ಈ ಹೇಳಿಕೆ ಸತೀಶ್‌ ಜಾರಕಿಹೊಳಿಗೆ ತಿರುಗೇಟು ನೀಡಿದಂತೆ ಇತ್ತು.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮೈಸೂರು ಪ್ರವಾಸದ ಲಿಸ್ಟ್ ನಲ್ಲಿ ನಾನೂ ಇದ್ದೆ. ನಾನೇ ರಾಜು ಕಾಗೆ, ಮಹಾಂತೇಶ ಕೌಜಲಗಿ ಜೊತೆಗೆ ಮಾತನಾಡಿದ್ದೆ. ಎಲ್ಲರೂ ಸೇರಿ ಮೈಸೂರು ಪ್ರವಾಸಕ್ಕೆ ಹೋಗಲು ತೀರ್ಮಾನಿಸಿದ್ದೆವು. ಇದನ್ನು ಬಂಡಾಯ ಎಂದು ಬಿಂಬಿಸುವುದು ಸರಿಯಲ್ಲ ಎಂದರು.

Share Post