Districts

ಮೈಸೂರಲ್ಲಿ ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆ..!

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೊಸಹುಂಡಿಯಲ್ಲಿ ನಕಲಿ ನಂದಿನಿ ತುಪ್ಪವನ್ನು ತಯಾರಿಸುವ ಗೋಡೌನ್ ಪತ್ತೆಯಾಗಿದೆ.
ಇಂದು ಬೆಳಗ್ಗೆ ಹೊಸ ಹುಂಡಿಯಲ್ಲಿರುವ ನಕಲಿ ನಂದಿನಿ ತುಪ್ಪ ತಯಾರಿಕಾ ಗೋಡೌನ್ ಮೇಲೆ ಹ್ಯೂಮನ್ ರೈಟ್ಸ್ ತಂಡ ದಾಳಿ ನಡೆಸಿದೆ.  ಹೊಸಹುಂಡಿಯಲ್ಲಿ ಈ ರೀತಿ ನಕಲಿ ನಂದಿನಿ ತುಪ್ಪ ತಯಾರಿಸಿ ಲೋಡ್ ಮಾಡಿ ಮೈಸೂರು ನಗರದಾದ್ಯಂತ ವಿತರಣೆ ಮಾಡುತ್ತಿದ್ದಾರೆ ಎಂದು ಸುದ್ದಿ ಬಂದಿತ್ತು. ಅದಕ್ಕಾಗಿ, ಹ್ಯೂಮನ್‌ ರೈಟ್ಸ್‌ ತಂಡ ದಾಳಿ ನಡೆಸಿದೆ.

ಈ ವೇಳೆ ಕೆಲವರು ಲಾಕ್ ಮಾಡಿಕೊಂಡು ಒಳಗಡೆ ಕೆಲಸ ಮಾಡುತ್ತಿದ್ದರು. ನಂದಿನಿ ತುಪ್ಪದ ರೂಪವೇ ಬರಲೆಂದು ಅದಕ್ಕೆ ಡಾಲ್ಡಾ ಮಿಕ್ಸ್ ಮಾಡಿ ಅದನ್ನು ಪ್ಯಾಕಿಂಗ್ ಮಷಿನ್ ನಲ್ಲಿ ಒಂದಾದ ನಂತರ ಒಂದು ಟಿನ್ ಗಟ್ಟಲೆ ತುಂಬಿದ್ದಾರೆ. ನಾಲ್ಕು ತಿಂಗಳಿಂದ ಈ ದಂಧೆ ನಡೆಯುತ್ತಿತ್ತು ಎಂದು ಗೊತ್ತಾಗಿದೆ. ವಿಷಯ ತಿಳಿದು ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕರು ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

Share Post