ನಿಷೇಧಿತ ಪಿಎಫ್‌ಐ ಮುಖಂಡರ ಮನೆಗಳ ಮೇಲೆ ದಾಳಿ
ಕಲಬುರಗಿ; ಎನ್‌ಐಎ ಅಧಿಕಾರಿಗಳು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಮುಖಂಡರ ಮನೆ ಮೇಲೆ ದಾಳಿ ಮಾಡಿದ್ದಾರೆ. ನಿನ್ನೆ ಈ ದಾಳಿ ನಡೆದಿದ್ದು, ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
ಈ ಬಗ್ಗೆ ಎನ್‌ಐಎ ಅಧಿಕಾರಿಗಳು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ತನಿಖೆ ಪ್ರಗತಿಯಲ್ಲಿದೆ ಅಂತ ಹೇಳಿದಾರೆ. ಆದ್ರೆ ಯಾರ ಮನೆ ಮೇಲೆ ದಾಳಿ ಮಾಡಲಾಗಿದೆ ಎಂಬ ವಿವರ ನೀಡಲು ಅಧಿಕಾರಿಗಳು ನಿರಾಕರಿಸಿದ್ದಾರೆ. ಜೊತೆಗೆ ಈ ಬಗ್ಗೆ ಸ್ಥಳೀಯ ಪೊಲೀಸರಿಗೂ ಕೂಡಾ ಎನ್‌ಐಎ ಅಧಿಕಾರಿಗಳು ನೀಡಿಲ್ಲ. ಸೆಪ್ಟೆಂಬರ್ 22ರಂದು ಎನ್ಐಎ ಪಿಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ಏಜಾಜ್ ಅಲಿ ಮತ್ತು ಖಜಾಂಚಿ ಶಾಹೀದ್ ನಾಸೀರ್ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ಮಾಡಲಾಗಿತ್ತು. ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು.