Districts

ನಾನು ಜೀವನದಲ್ಲಿ ಏನನ್ನೂ ಪ್ಲಾನ್ ಮಾಡಿದವನಲ್ಲ

ಚಿಕ್ಕಬಳ್ಳಾಪುರ: ನಾನು ಜೀವನದಲ್ಲಿ ಏನನ್ನೂ ಪ್ಲಾನ್ ಮಾಡಿದವನಲ್ಲ. ಆದ್ರೆ ಸಿನಿಮಾರಂಗದಲ್ಲಿ ಉತ್ತಮ ನಟನಾಗಿ ಯಶಸ್ವಿಯಾಗುವ ಪ್ಲಾನ್ ಇದೆ ಎಂದು ನಟ ನಿಖಿಲ್ ಕುಮಾರಸ್ವಾಮಿ ಹೇಳಿದರು.
ರೈಡರ್’ ಸಿನಿಮಾ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆ ಬಾಲಾಜಿ ಚಿತ್ರಮಂದಿರಕ್ಕೆ ಭೇಟಿ ನೀಡಿದ ನಿಖಿಲ್ ಅವರು, ಕೆಲಕಾಲ ಅಭಿಮಾನಿಗಳ ಜೊತೆ ಸಿನಿಮಾ ವೀಕ್ಷಣೆ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಕಡೆ ‘ರೈಡರ್’ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.ಕುಟುಂಬಸ್ಥರ ಜೊತೆ ಇಂದು ಸಂಜೆ ಒರಾಯನ್ ಮಾಲ್ ನಲ್ಲಿ ಸಿನಿಮಾ ವೀಕ್ಷಣೆ ಮಾಡಲಿದ್ದೇನೆ. ತಂದೆ-ತಾಯಿ, ತಾತ-ಅಜ್ಜಿ ಸಂಜೆ ಸಿನಿಮಾ ನೋಡಲು ಬರ್ತಿದ್ದಾರೆ ಎಂದರು.
ಇದೇ ವೇಳೆ ಎಂಇಎಸ್ ಪುಂಡಾಟಿಕೆ ಕುರಿತು ಮಾತನಾಡಿದ್ದು, ಎಂಇಎಸ್ ವಿರುದ್ಧ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂದೆ ಈ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳುಬೇಕು ಎಂದು ಒತ್ತಾಯಿಸಿದರು.

 

Share Post